ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯ ನಿಧನಕ್ಕೆ ಪ್ರಧಾನಿ ಸಂತಾಪ

Posted On: 08 DEC 2021 6:44PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, "ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಇದರಲ್ಲಿ ನಾವು ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಭಾರತಕ್ಕಾಗಿ ಅವರು ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದಾರೆ. ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ.

ಜನರಲ್ ಬಿಪಿನ್ ರಾವತ್ ಅವರು ಶ್ರೇಷ್ಠ ಸೈನಿಕರಾಗಿದ್ದರು. ಅಪ್ಪಟ ದೇಶಭಕ್ತರಾಗಿದ್ದ ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ನೀಡಿರುವ ಕೊಡುಗೆ ಅಪಾರವಾದುದು. ವ್ಯೂಹಾತ್ಮಕ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿದ್ದವು. ಅವರ ನಿಧನ ನನಗೆ ತೀವ್ರ ದುಃಖ ತಂದಿದೆ. ಓಂ ಶಾಂತಿ.

ಭಾರತದ ಮೊದಲ ಸಶಸ್ತ್ರಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ನೇಮಕಗೊಂಡ ಬಳಿಕ ಜನರಲ್ ರಾವತ್ ಅವರು ರಕ್ಷಣಾ ಸುಧಾರಣೆಗಳು ಸೇರಿದಂತೆ ನಮ್ಮ ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವೈವಿಧ್ಯಮಯ ಅಂಶಗಳ ಮೇಲೆ ಕೆಲಸ ಮಾಡಿದರು. ಸೈನ್ಯದಲ್ಲಿ ಸೇವೆ ಸಲ್ಲಿಸಿದ ಶ್ರೀಮಂತ ಅನುಭವವನ್ನು ಅವರು ತಮ್ಮ ಕಾರ್ಯಕ್ಷೇತ್ರದಲ್ಲಿ ಬಳಸಿಕೊಂಡರು. ಅವರ ಅಸಾಧಾರಣ ಸೇವೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ.” ಎಂದಿದ್ದಾರೆ.

***



(Release ID: 1779547) Visitor Counter : 186