ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜೀವ ಹಾನಿಗೆ ಪ್ರಧಾನಿ ಸಂತಾಪ

ಪ್ರಕಟಣಾ ದಿನಾಂಕ: 13 DEC 2021 8:59PM by PIB Bengaluru

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಜೀವ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವಿವರಗಳನ್ನು ಕೋರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿಯವರ ಕಚೇರಿ, "ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ @narendramodi ವಿವರಗಳನ್ನು ಕೋರಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ.” ಎಂದು ತಿಳಿಸಿದೆ.

***


(ಪ್ರಕಟಣೆ ಐ.ಡಿ.: 1781411) ವಿಸಿಟರ್ ಕೌಂಟರ್ : 149