ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಿಸೆಂಬರ್ 17ರಂದು ಅಖಿಲ ಭಾರತ ಮೇಯರ್‌ಗಳ ಸಮಾವೇಶವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ


ಸಮ್ಮೇಳನದ ವಿಷಯ: ನವ ನಗರ ಭಾರತ

प्रविष्टि तिथि: 16 DEC 2021 10:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಡಿಸೆಂಬರ್ 17ರಂದು ಬೆಳಿಗ್ಗೆ 10:30ಕ್ಕೆ ವಾರಾಣಸಿಯಲ್ಲಿ ಉತ್ತರ ಪ್ರದೇಶದ ನಗರಾಭಿವೃದ್ಧಿ ಇಲಾಖೆ ಆಯೋಜಿಸಿರುವ ಅಖಿಲ ಭಾರತ ಮೇಯರ್‌ಗಳ ಸಮಾವೇಶವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ದೇಶದ ವಿವಿಧ ರಾಜ್ಯಗಳ ಮೇಯರ್‌ಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮ್ಮೇಳನದ ವಿಷಯ "ನವ ನಗರ ಭಾರತ”.

ನಗರ ಪ್ರದೇಶಗಳಲ್ಲಿ ಜೀವನವನ್ನು ಸುಗಮಗೊಳಿಸಲು ಪ್ರಧಾನಮಂತ್ರಿಯವರ ನಿರಂತರ ಪ್ರಯತ್ನ ಮುಂದುವರಿದಿದೆ. ನಗರ ಪ್ರದೇಶದಲ್ಲಿ ಶಿಥಿಲಗೊಂಡ ನಗರ ಮೂಲಸೌಕರ್ಯ ಸೌಲಭ್ಯಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಅನೇಕ ಯೋಜನೆಗಳು ಹಾಗೂ ಉಪಕ್ರಮಗಳನ್ನು ಪ್ರಾರಂಭಿಸಿದೆ. ಪ್ರಯತ್ನಗಳಲ್ಲಿ ಉತ್ತರ ಪ್ರದೇಶ ರಾಜ್ಯದತ್ತ ವಿಶೇಷ ಗಮನ ಹರಿಸಲಾಗಿದೆ. ಇದರ ಫಲವಾಗಿ, ವಿಶೇಷವಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯವು ನಗರ ಭೂದೃಶ್ಯದ ಅದ್ಭುತ ಪ್ರಗತಿ ಮತ್ತು ಪರಿವರ್ತನೆಗೆ ಸಾಕ್ಷಿಯಾಗಿದೆ.

ನಗರ ಅಭಿವೃದ್ಧಿ ಕ್ಷೇತ್ರದಲ್ಲಿ ಭಾರತ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರದ ಪ್ರಮುಖ ಸಾಧನೆಗಳನ್ನು ಪ್ರದರ್ಶಿಸಲು ಡಿಸೆಂಬರ್ 17 ರಿಂದ 19 ರವರೆಗೆ ಪ್ರದರ್ಶನ ಮೇಳವನ್ನೂ ಆಯೋಜಿಸಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.

***


(रिलीज़ आईडी: 1782151) आगंतुक पटल : 297
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam