ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾತಾ ವೈಷ್ಣೂದೇವಿ ಭವನದಲ್ಲಿ ಕಾಲ್ತುಳಿತಕ್ಕೆ ಬಲಿಯಾದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲು ಪ್ರಧಾನಿ ಅನುಮೋದನೆ

प्रविष्टि तिथि: 01 JAN 2022 12:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತಾ ವೈಷ್ಣೂದೇವಿ ಭವನದಲ್ಲಿ ಕಾಲ್ತುಳಿತಕ್ಕೆ ಬಲಿಯಾದವರಿಗೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

ಈ ಕುರಿತು ಪ್ರಧಾನಮಂತ್ರಿಯವರ ಕಚೇರಿ ಹೀಗೆ ಟ್ವೀಟ್‌ ಮಾಡಿದೆ:

"ಮಾತಾ ವೈಷ್ಣೂದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ @narendramodi"

***


(रिलीज़ आईडी: 1786846) आगंतुक पटल : 223
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam