ಪ್ರಧಾನ ಮಂತ್ರಿಯವರ ಕಛೇರಿ
ಸೇನಾ ದಿನದ ಅಂಗವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ಶುಭ ಹಾರೈಸಿದ ಪ್ರಧಾನಿ
प्रविष्टि तिथि:
15 JAN 2022 9:13AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇನಾ ದಿನದ ಸಂದರ್ಭದಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಶುಭ ಕೋರಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ:
"ಸೇನಾ ದಿನದ ಸಂದರ್ಭದಲ್ಲಿ, ವಿಶೇಷವಾಗಿ ನಮ್ಮ ವೀರ ಸೈನಿಕರು, ಗೌರವಾನ್ವಿತ ನಿವೃತ್ತ ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಹಾರೈಕೆಗಳು. ಭಾರತೀಯ ಸೇನೆಯು ಶೌರ್ಯ ಮತ್ತು ವೃತ್ತಿಪರತೆಗೆ ಹೆಸರುವಾಸಿಯಾಗಿದೆ. ರಾಷ್ಟ್ರೀಯ ಸುರಕ್ಷತೆಗಾಗಿ ಭಾರತೀಯ ಸೇನೆಯ ಅಮೂಲ್ಯ ಕೊಡುಗೆಯು ಪದಗಳಿಗೆ ನಿಲುಕದು.
ಭಾರತೀಯ ಯೋಧರು ಪ್ರತಿಕೂಲ ಹವಾಮಾನ, ಭೂಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದಷ್ಟೇ ಅಲ್ಲದೆ, ನೈಸರ್ಗಿಕ ವಿಪತ್ತುಗಳು ಸೇರಿದಂತೆ ಮಾನವೀಯ ಬಿಕ್ಕಟ್ಟಿನ ಸಮಯದಲ್ಲೂ ನಾಗರಿಕರಿಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಸಾಗರೋತ್ತರ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಸೇನೆಯ ಅದ್ಭುತ ಕೊಡುಗೆಯ ಬಗ್ಗೆ ಇಡೀ ಭಾರತಕ್ಕೆ ಹೆಮ್ಮೆ ಇದೆ."
***
(रिलीज़ आईडी: 1790167)
आगंतुक पटल : 291
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam