ಪ್ರಧಾನ ಮಂತ್ರಿಯವರ ಕಛೇರಿ
ಪೌರಾಣಿಕ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
17 JAN 2022 9:50AM by PIB Bengaluru
ಪೌರಾಣಿಕ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಇಡೀ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಅವರು;
ವಿಶ್ವದಾದ್ಯಂತ ಭಾರತೀಯ ನೃತ್ಯಕ್ಕೆ ವಿಶಿಷ್ಟ ಗುರುತನ್ನು ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲುವಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ. ಓಂ ಶಾಂತಿ!" ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1790439)
ವಿಸಿಟರ್ ಕೌಂಟರ್ : 292
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam