ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜ್ಯಗಳ ಸಂಸ್ಥಾಪನಾ ದಿನದ ಅಂಗವಾಗಿ ಮಣಿಪುರ, ಮೇಘಾಲಯ ಮತ್ತು ತ್ರಿಪುರಾದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 21 JAN 2022 9:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ಸಂಸ್ಥಾಪನಾ ದಿನದ ಅಂಗವಾಗಿ ಆ ರಾಜ್ಯಗಳ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ  “ಮಣಿಪುರ, ಮೇಘಾಲಯ ಮತ್ತು ತ್ರಿಪುರಾ ರಾಜ್ಯಗಳ ಸ್ಥಾಪನಾ ದಿನದ ಅಂಗವಾಗಿ ಆ ರಾಜ್ಯಗಳ ಜನರಿಗೆ ಶುಭಾಶಯಗಳು. ಈ ರಾಜ್ಯಗಳು ಭಾರತದ ಅಭಿವೃದ್ಧಿ ಕ್ರಿಯಾಶೀಲ ಕೊಡುಗೆಗಳನ್ನು ನೀಡುತ್ತಿವೆ. ಅವುಗಳ ನಿರಂತರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ’’ ಎಂದು ಹೇಳಿದ್ದಾರೆ.

***


(Release ID: 1791601) Visitor Counter : 210