ಪ್ರಧಾನ ಮಂತ್ರಿಯವರ ಕಛೇರಿ

ಜನವರಿ 24 ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನ ಮಂತ್ರಿ ಸಂವಾದ ನಡೆಸಲಿದ್ದಾರೆ


ಮೊದಲ ಬಾರಿಗೆ, ಬ್ಲಾಕ್‌ಚೈನ್ ತಂತ್ರಜ್ಞಾನ ಬಳಕೆಯೊಂದಿಗೆ ಪ್ರಶಸ್ತಿ ಪುರಸ್ಕೃತರು ಡಿಜಿಟಲ್ ಪ್ರಮಾಣಪತ್ರಗಳನ್ನು ಪಡೆಯಲಿದ್ದಾರೆ

Posted On: 23 JAN 2022 10:06AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ( ಪಿಎಂಆರ್ ಬಿಪಿ) ಪುರಸ್ಕೃತರೊಂದಿಗೆ  2022 ರ ಜನವರಿ 24 ರಂದು ಮಧ್ಯಾಹ್ನ 12 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಬಳಸಿಕೊಂಡು 2022 ಮತ್ತು 2021 ರ ಪಿಎಂಆರ್ ಬಿಪಿ  ಪ್ರಶಸ್ತಿ ಪುರಸ್ಕೃತರಿಗೆ ಡಿಜಿಟಲ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರಿಗೆ ಪ್ರಮಾಣಪತ್ರ ನೀಡಲು ಈ ತಂತ್ರಜ್ಞಾನವನ್ನು ಮೊದಲ ಬಾರಿಗೆ ಬಳಸಲಾಗುತ್ತಿದೆ.

ನಾವೀನ್ಯತೆ, ಸಮಾಜ ಸೇವೆ, ಪಾಂಡಿತ್ಯಪೂರ್ಣ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪಿಎಂಆರ್ ಬಿಪಿ  ಪ್ರಶಸ್ತಿಯನ್ನು ನೀಡುತ್ತಿದೆ. ಈ ವರ್ಷ, ದೇಶಾದ್ಯಂತ 29 ಮಕ್ಕಳನ್ನು ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ಪಿಎಂಆರ್ ಬಿಪಿ -2022 ಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರು ಪ್ರತಿ ವರ್ಷ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುತ್ತಾರೆ. ಪಿಎಂಆರ್ ಬಿಪಿಯ ಪ್ರತಿಯೊಬ್ಬ ಪ್ರಶಸ್ತಿ ವಿಜೇತರಿಗೆ ಪದಕ, 1 ಲಕ್ಷ ರೂ. ನಗದು ಬಹುಮಾನ ಮತ್ತು ಪ್ರಮಾಣಪತ್ರವನ್ನು ನೀಡಲಾಗುತ್ತದೆ. ನಗದು ಬಹುಮಾನವನ್ನು PMRBP 2022 ವಿಜೇತರ ಆಯಾ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

****



(Release ID: 1791920) Visitor Counter : 163