ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಖ್ಯಾತ ಪುರಾತತ್ವಶಾಸ್ತ್ರಜ್ಞ ಶ್ರೀ ಆರ್ ನಾಗಸ್ವಾಮಿ ಅವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ

ಪ್ರಕಟಣಾ ದಿನಾಂಕ: 23 JAN 2022 8:59PM by PIB Bengaluru

ಖ್ಯಾತ ಪುರಾತತ್ವಶಾಸ್ತ್ರಜ್ಞ ಶ್ರೀ ಆರ್ ನಾಗಸ್ವಾಮಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.  ತಮಿಳುನಾಡಿನ  ವೈವಿಧ್ಯಮಯ ಸಂಸ್ಕೃತಿಯನ್ನು ಜನಪ್ರಿಯಗೊಳಿಸುವಲ್ಲಿ ಅವರು ನೀಡಿದ ಕೊಡುಗೆಯನ್ನು ಪ್ರಧಾನಿಮಂತ್ರಿಯವರು ಸ್ಮರಿಸಿದರು.

 "ಮುಂಬರುವ ಪೀಳಿಗೆಗಳು ತಮಿಳುನಾಡಿನ ವೈವಿಧ್ಯಮಯ ಸಂಸ್ಕೃತಿಯನ್ನು ಜನಪ್ರಿಯಗೊಳಿಸುವಲ್ಲಿ ತಿರು ಆರ್. ನಾಗಸ್ವಾಮಿಯವರ ಕೊಡುಗೆಗಳನ್ನು ಎಂದಿಗೂ ಮರೆಯುವುದಿಲ್ಲ. ಇತಿಹಾಸ, ಶಿಲಾಶಾಸನ ಮತ್ತು ಪುರಾತತ್ತ್ವ ಶಾಸ್ತ್ರದ ಬಗ್ಗೆ ಅವರ ಒಲವು ಗಮನಾರ್ಹವಾಗಿದೆ.  ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಪ್ರಧಾನಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

 

***


(ಪ್ರಕಟಣೆ ಐ.ಡಿ.: 1792065) ವಿಸಿಟರ್ ಕೌಂಟರ್ : 243