ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನ ತಾರ್ಡಿಯೊದಲ್ಲಿ ಕಟ್ಟಡ ಬೆಂಕಿಯಲ್ಲಿ ಸಂಭವಿಸಿದ ಸಾವುಗಳಿಗೆ ಪ್ರಧಾನ ಮಂತ್ರಿ ಸಂತಾಪ ಸೂಚಿಸಿದ್ದಾರೆ.
PMNRF ನಿಂದ ಪರಿಹಾರಕ್ಕೆ ಅನುಮೋದನೆ
प्रविष्टि तिथि:
22 JAN 2022 10:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಂಬೈನ ತಾರ್ಡಿಯೊದಲ್ಲಿ ಕಟ್ಟಡ ಬೆಂಕಿಯಲ್ಲಿ ಸಾವನ್ನಪ್ಪಿದವರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ:
ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ:
"ಮುಂಬೈನ ತಾರ್ಡಿಯೊದಲ್ಲಿ ಕಟ್ಟಡದ ಬೆಂಕಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥನೆ: ಪ್ರಧಾನಿ @narendramodi
ಮುಂಬೈನ ತಾರ್ಡಿಯೊದಲ್ಲಿ ಕಟ್ಟಡ ಬೆಂಕಿಯಿಂದಾಗಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ PMNRF ನಿಂದ ತಲಾ 2 ಲಕ್ಷ ರೂ. ನೀಡಲಾಗುವುದು. ಹಾಗೆಯೇ ಗಾಯಾಳುಗಳಿಗೆ ತಲಾ 50,000 ರೂ.ಪರಿಹಾರ ನೀಡಲಾಗುವುದು: PM @narendramodi"
***
(रिलीज़ आईडी: 1792090)
आगंतुक पटल : 217
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam