ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗಳಿಗೆ ಪ್ರಧಾನಿ ಸಂತಾಪ
ಮೃತರ ಕುಟುಂಬಸ್ಥರಿಗೆ ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
25 JAN 2022 10:56AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೆಲ್ಸೂರ ಬಳಿಯ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.
ಸರಣಿ ಟ್ವೀಟ್ ಮೂಲಕ, ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ;
"ಮಹಾರಾಷ್ಟ್ರದ ಸೆಲ್ಸೂರ ಬಳಿಯ ಅಪಘಾತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ
ಪ್ರಧಾನಿ @narendramodi ಸೆಲ್ಸೂರ ಬಳಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪಿಎಂಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ."
***
(ಪ್ರಕಟಣೆ ಐ.ಡಿ.: 1792450)
ವಿಸಿಟರ್ ಕೌಂಟರ್ : 297
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam