ಪ್ರಧಾನ ಮಂತ್ರಿಯವರ ಕಛೇರಿ

ಗಾಂಧೀಜಿ ಪುಣ್ಯತಿಥಿ ಅಂಗವಾಗಿ ಗಾಂಧೀಜಿಯನ್ನು ಸ್ಮರಿಸಿದ ಪ್ರಧಾನಮಂತ್ರಿ

Posted On: 30 JAN 2022 9:59AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಅವರ ಪುಣ್ಯ ತಿಥಿ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇಂದು ಹುತಾತ್ಮರ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರು ನಮ್ಮ ದಿಟ್ಟತನದಿಂದ ರಾಷ್ಟ್ರವನ್ನು ರಕ್ಷಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೂ ಗೌರವ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಬಾಪು ಅವರನ್ನು ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಿದ್ದೇವೆ. ಅವರ ಉದಾತ್ತ ಆದರ್ಶಗಳನ್ನು ಇನ್ನಷ್ಟು ಜನಪ್ರಿಯಗೊಳಿಸುವುದು ನಮ್ಮ ಸಾಮೂಹಿಕ ಪ್ರಯತ್ನವಾಗಿದೆ. ಇಂದು, ಹುತಾತ್ಮರ ದಿನದಂದು, ನಮ್ಮ ದೇಶವನ್ನು ದಿಟ್ಟತದಿಂದ ಧೈರ್ಯದಿಂದ ರಕ್ಷಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ಶೌರ್ಯ ಸದಾ ಸ್ಮರಣೀಯ’’ ಎಂದು ಹೇಳಿದ್ದಾರೆ. 

 

***
 



(Release ID: 1793682) Visitor Counter : 143