ಹಣಕಾಸು ಸಚಿವಾಲಯ

ನಿಮ್ಹಾನ್ಸ್‌, ರಾಷ್ಟ್ರೀಯ ದೂರವಾಣಿ-ಮಾನಸಿಕ (ಟೆಲಿ ಮೆಂಟಲ್‌) ಆರೋಗ್ಯ ಕಾರ್ಯಕ್ರಮಕ್ಕೆ ನೋಡಲ್‌ ಕೇಂದ್ರವಾಗಿದೆ: 2022-23ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ಘೋಷಣೆ


ನಿಮ್ಹಾನ್ಸ್‌ ಮತ್ತು ಐಐಐಟಿಬಿ ರಾಷ್ಟ್ರೀಯ ದೂರವಾಣಿ-ಮಾನಸಿಕ  ಆರೋಗ್ಯ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲಿದೆ

Posted On: 01 FEB 2022 4:05PM by PIB Bengaluru

ಜನರಲ್ಲಿ ಕೋವಿಡ್‌-19 ಸಾಂಕ್ರಾಮಿಕ ಅವಧಿಯಲ್ಲಿ ಹೊರಹೊಮ್ಮಿದ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಉಲ್ಲೇಖಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ನೊಂದಿಗೆ ರಾಷ್ಟ್ರೀಯ ಟೆಲಿ-ಮೆಂಟಲ್‌ (ದೂರವಾಣಿ ಮಾನಸಿಕ) ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.

ಸಾಂಕ್ರಾಮಿಕ ರೋಗವು ಎಲ್ಲಾ ವಯಸ್ಸಿನ ಜನರಲ್ಲಿಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಿದೆ. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳ ಪ್ರವೇಶವನ್ನು ಉತ್ತಮಗೊಳಿಸಲು, ‘ರಾಷ್ಟ್ರೀಯ ದೂರವಾಣಿ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು,” ಎಂದು ಗೌರವಾನ್ವಿತ ಸಚಿವರು ಸಂಸತ್ತಿನಲ್ಲಿತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದರು.

ರಾಷ್ಟ್ರೀಯ ಟೆಲಿ ಮೆಂಟಲ್‌ ಹೆಲ್ತ್‌ ಕಾರ್ಯಕ್ರಮದ ಬಗ್ಗೆ ವಿವರಿಸಿದ ಮಾನ್ಯ ಸಚಿವರು, ಕಾರ್ಯಕ್ರಮವು 23 ದೂರವಾಣಿ ಮಾನಸಿಕ ಆರೋಗ್ಯ ಶ್ರೇಷ್ಠತಾ ಕೇಂದ್ರಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.

ಬೆಂಗಳೂರು ಮೂಲದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌) ಇದರ ನೋಡಲ್‌ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಮತ್ತು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಬೆಂಗಳೂರು (ಐಐಐಟಿಬಿ) ಅಗತ್ಯ ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್‌ ಮಾಂಡವಿಯಾ ಅವರು ಟ್ವಿಟರ್‌ನಲ್ಲಿಈ ಉಪಕ್ರಮವನ್ನು ಘೋಷಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ನಿಮ್ಹಾನ್ಸ್‌ ಅಡಿಯಲ್ಲಿ 23 ದೂರವಾಣಿ-ಮಾನಸಿಕ ಆರೋಗ್ಯ ಶ್ರೇಷ್ಠತಾ ಕೇಂದ್ರಗಳ ಜಾಲದೊಂದಿಗೆ ಎಲ್ಲರಿಗೂ ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆಯನ್ನು ಖಚಿತಪಡಿಸುತ್ತದೆ ಎಂದು ಡಾ. ಮಾಂಡವಿಯಾ ಟ್ವೀಟ್‌ ಮಾಡಿದ್ದಾರೆ.

***



(Release ID: 1794339) Visitor Counter : 173


Read this release in: English