ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 06 FEB 2022 10:27AM by PIB Bengaluru

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬದೊಂದಿಗೆ ಪ್ರಧಾನಿ ಮಾತನಾಡಿ ಸಾಂತ್ವನ ಹೇಳಿದ್ದಾರೆ. ಅವರ ಸುಮಧುರ ಕಂಠವು ಜನರನ್ನು ಮಂತ್ರಮುಗ್ಧರನ್ನಾಗಿಸುವ ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು. ಅವರನ್ನು ಮುಂಬರುವ ಪೀಳಿಗೆಯು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತದೆ ಎಂದು ಅವರು ಹೇಳಿದರು.

ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಅವರು;

"ನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ, ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರು ನಮ್ಮ ದೇಶದಲ್ಲಿ ತುಂಬಲಾರದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ. ಮುಂಬರುವ ಪೀಳಿಗೆಗಳು ಅವರನ್ನು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತವೆ, ಅವರ ಮಧುರ ಧ್ವನಿಯು ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು. ಜನರನ್ನು ಮಂತ್ರಮುಗ್ಧಗೊಳಿಸುವಂತಹುದು."

"ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಹೊರತಂದಿವೆ. ಅವರು ದಶಕಗಳ ಕಾಲ ಭಾರತೀಯ ಚಲನಚಿತ್ರ ಪ್ರಪಂಚದ ಸ್ಥಿತ್ಯಂತರಗಳನ್ನು ನಿಕಟವಾಗಿ ವೀಕ್ಷಿಸಿದರು. ಚಲನಚಿತ್ರಗಳನ್ನು ಮೀರಿ, ಅವರು ಯಾವಾಗಲೂ ಭಾರತದ ಬೆಳವಣಿಗೆಯ ಬಗ್ಗೆ ಭಾವೋದ್ರಿಕ್ತರಾಗಿದ್ದರು. ಅವರು ಯಾವಾಗಲೂ ಬಲವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸುತ್ತಾರೆ."

"ಲತಾ ದೀದಿ ಅವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ ಇದು ನನ್ನ ಗೌರವ ಎಂದು ಪರಿಗಣಿಸುತ್ತೇನೆ. ಅವರೊಂದಿಗಿನ ನನ್ನ ಸಂವಹನವು ಅವಿಸ್ಮರಣೀಯವಾಗಿ ಉಳಿಯುತ್ತದೆ. ಲತಾ ದೀದಿ ಅವರ ನಿಧನದಿಂದ ನನ್ನ ಸಹ ಭಾರತೀಯರೊಂದಿಗೆ ನಾನು ದುಃಖಿಸುತ್ತೇನೆ. ಅವರ ಕುಟುಂಬದೊಂದಿಗೆ ಮಾತನಾಡಿ ನನ್ನ ಸಂತಾಪ ವ್ಯಕ್ತಪಡಿಸಿದ್ದೇನೆ. ಓಂ ಶಾಂತಿ." ಎಂದು ಹೇಳಿದ್ದಾರೆ.

***


(Release ID: 1795927) Visitor Counter : 207