ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಫೆಬ್ರವರಿ 11ರಂದು ʻಒಂದು ಸಾಗರ ಶೃಂಗಸಭೆʼಯ ಉನ್ನತ ಮಟ್ಟದ ವಿಭಾಗದಲ್ಲಿ ಭಾಗವಹಿಸಿ ಮಾತನಾಡಲಿರುವ ಪ್ರಧಾನಿ

Posted On: 10 FEB 2022 6:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 11ರಂದು ಮಧ್ಯಾಹ್ನ 2:30ರ ಸುಮಾರಿಗೆ `ಒಂದು ಸಾಗರ ಶೃಂಗಸಭೆ’ಯ ಉನ್ನತ ಮಟ್ಟದ ವಿಭಾಗವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಷಣ ಮಾಡಲಿದ್ದಾರೆ. ಶೃಂಗಸಭೆಯ ಉನ್ನತ ಮಟ್ಟದ ವಿಭಾಗವನ್ನು ಉದ್ದೇಶಿಸಿ ಜರ್ಮನಿ, ಬ್ರಿಟನ್‌, ದಕ್ಷಿಣ ಕೊರಿಯಾ, ಜಪಾನ್, ಕೆನಡಾ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಸರ್ಕಾರಗಳ ಮುಖ್ಯಸ್ಥರು ಮಾತನಾಡಲಿದ್ದಾರೆ.

ವಿಶ್ವಸಂಸ್ಥೆ ಮತ್ತು ವಿಶ್ವ ಬ್ಯಾಂಕ್ ಸಹಕಾರದೊಂದಿಗೆ ಫ್ರಾನ್ಸ್‌ನ ಬ್ರೆಸ್ಟ್‌ನಲ್ಲಿ ಫೆಬ್ರವರಿ 9 ರಿಂದ 11 ರವರೆಗೆ ʻಒಂದು ಸಾಗರ ಶೃಂಗಸಭೆʼಯನ್ನು ಆಯೋಜಿಸಲಾಗಿದೆ. ಆರೋಗ್ಯಕರ ಮತ್ತು ಸುಸ್ಥಿರ ಸಾಗರ ಪರಿಸರ ವ್ಯವಸ್ಥೆಗಳನ್ನು ಸಂರಕ್ಷಿಸುವ ಮತ್ತು ಬೆಂಬಲಿಸುವ ನಿಟ್ಟಿನಲ್ಲಿ ಸ್ಪಷ್ಟ ಕ್ರಮ ಕೈಗೊಳ್ಳಲು ಅಂತರರಾಷ್ಟ್ರೀಯ ಸಮುದಾಯವನ್ನು ಸಜ್ಜುಗೊಳಿಸುವುದು ಈ ಶೃಂಗಸಭೆಯ ಉದ್ದೇಶವಾಗಿದೆ.

***


(Release ID: 1797429) Visitor Counter : 213