ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿರಿಯ ಗಾಯಕ ಮತ್ತು ಸಂಗೀತ ಸಂಯೋಜಕ ಶ್ರೀ ಬಪ್ಪಿ ಲಹಿರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 16 FEB 2022 9:15AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಗಾಯಕ ಮತ್ತು ಸಂಗೀತ ಸಂಯೋಜಕ ಶ್ರೀ ಬಪ್ಪಿ ಲಹಿರಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಟ್ವೀಟ್‌ನಲ್ಲಿ ಪ್ರಧಾನಿ ಅವರು, "ಶ್ರೀ ಬಪ್ಪಿ ಲಹಿರಿ  ಅವರ ಸಂಗೀತವು ಎಲ್ಲವನ್ನೂ ಒಳಗೊಂಡಿರುತ್ತದೆ, ವೈವಿಧ್ಯಮಯ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುತ್ತದೆ. ಹಲವು ತಲೆಮಾರುಗಳ ಜನರು ಅವರ ಕೃತಿಗಳೊಂದಿಗೆ ಬೆಸೆದುಕೊಂಡಿದ್ದಾರೆ. ಅವರ ಉತ್ಸಾಹಭರಿತ ಜೀವಂತಿಕೆಯ ಸ್ವಭಾವವನ್ನು ಎಲ್ಲರೂ ಕಳೆದುಕೊಳ್ಳುತ್ತಾರೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ," ಎಂದಿದ್ದಾರೆ.

***


(रिलीज़ आईडी: 1798662) आगंतुक पटल : 233
इस विज्ञप्ति को इन भाषाओं में पढ़ें: Punjabi , English , Urdu , Marathi , हिन्दी , Assamese , Manipuri , Bengali , Gujarati , Odia , Tamil , Telugu , Malayalam