ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಕಳೆದುಕೊಂಡವರಿಗೆ ಪ್ರಧಾನಮಂತ್ರಿಯವರ ಸಂತಾಪ


ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸಂತ್ರಸ್ತರಿಗೆ ಪರಿಹಾರ ಮೊತ್ತದ ಘೋಷಣೆ

ಪ್ರಕಟಣಾ ದಿನಾಂಕ: 21 FEB 2022 9:52AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಕಳೆದುಕೊಂಡವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ಮೊತ್ತ  ನೀಡಲು ಪ್ರಧಾನ ಮಂತ್ರಿಯವರು ಅನುಮೋದಿಸಿದ್ದಾರೆ.

ಪ್ರಧಾನ ಮಂತ್ರಿಯವರ ಕಾರ್ಯಾಲಯದ ಟ್ವೀಟ್ ಹೀಗಿದೆ:

"ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ನೋವಿನಿಂದ ಕೂಡಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ: ಪ್ರಧಾನ ಮಂತ್ರಿ"

ಕೋಟಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಗಾಯಾಳುಗಳಿಗೆ ರೂ 50,000 ನೆರವು: ಪ್ರಧಾನ ಮಂತ್ರಿ

 

***


(ಪ್ರಕಟಣೆ ಐ.ಡಿ.: 1800010) ವಿಸಿಟರ್ ಕೌಂಟರ್ : 222