ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ


ಸಂತ್ರಸ್ತರಿಗೆ 'ಪಿಎಂಎನ್‌ಆರ್‌ಎಫ್’ನಿಂದ ಪರಿಹಾರ ಘೋಷಣೆ

ಪ್ರಕಟಣಾ ದಿನಾಂಕ: 22 FEB 2022 12:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಚೇರಿ ಈ ಕುರಿತು ಹೀಗೆ ಟ್ವೀಟ್ ಮಾಡಿದೆ;

"ಉತ್ತರಾಖಂಡದ ಚಂಪಾವತ್‌ನಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ.   ಅದರಲ್ಲಿ ಮಡಿದವರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ: ಪ್ರಧಾನಿ"

"ಉತ್ತರಾಖಂಡದಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ @narendramodi ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."

***


(ಪ್ರಕಟಣೆ ಐ.ಡಿ.: 1800248) ವಿಸಿಟರ್ ಕೌಂಟರ್ : 250