ಪ್ರಧಾನ ಮಂತ್ರಿಯವರ ಕಛೇರಿ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಜೀವ ಹಾನಿಗೆ ಪ್ರಧಾನಿ ಸಂತಾಪ


ಸಂತ್ರಸ್ತರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ಪರಿಹಾರ ಘೋಷಣೆ

Posted On: 22 FEB 2022 1:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಜೀವ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯ ಕುರಿತು ಹೀಗೆ ಟ್ವೀಟ್ ಮಾಡಿದೆ;

"ಹಿಮಾಚಲ ಪ್ರದೇಶದ ಉನಾದಲ್ಲಿರುವ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಅದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಇದೇ ವೇಳೆ, ಅವಘಡದಲ್ಲಿ ಗಾಯಗೊಂಡ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಿ"

"ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) lA 2 ಲಕ್ಷ ರೂ.ಗಳನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ"

***



(Release ID: 1800280) Visitor Counter : 164