ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚೆಸ್‌ನಲ್ಲಿ ಖ್ಯಾತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಆರ್. ಪ್ರಜ್ಞಾನಂದ ಗೆಲುವು ಸಾಧಿಸಿದ್ದಕ್ಕೆ ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ

ಪ್ರಕಟಣಾ ದಿನಾಂಕ: 23 FEB 2022 3:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆನ್‌ಲೈನ್ ಚೆಸ್ ಟೂರ್ನಮೆಂಟ್‌ನಲ್ಲಿ ಖ್ಯಾತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಗೆದ್ದಿದ್ದಕ್ಕಾಗಿ ಆರ್. ಪ್ರಜ್ಞಾನಂದ ಅವರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಅವರು; "ಯುವ ಪ್ರತಿಭೆ ಆರ್. ಪ್ರಜ್ಞಾನಂದ ಅವರ ಯಶಸ್ಸಿನ ಬಗ್ಗೆ ನಾವೆಲ್ಲರೂ ಸಂತೋಷಪಡುತ್ತಿದ್ದೇವೆ. ಹೆಸರಾಂತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ವಿರುದ್ಧ ಜಯಗಳಿಸಿದ ಅವರ ಸಾಧನೆಯ ಬಗ್ಗೆ ಹೆಮ್ಮೆಯಿದೆ. ಪ್ರತಿಭಾವಂತ ಪ್ರಜ್ಞಾನಂದ ಅವರ ಮುಂದಿನ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ." ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1800553) ವಿಸಿಟರ್ ಕೌಂಟರ್ : 278