ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಷ್ಯಾ ಒಕ್ಕೂಟದ ಅಧ್ಯಕ್ಷ ಮಾನ್ಯ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Posted On: 24 FEB 2022 10:41PM by PIB Bengaluru

ಉಕ್ರೇನ್ ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಪುಟಿನ್ ಅವರು ಪ್ರಧಾನಮಂತ್ರಿಯವರಿಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕತೆ ಮತ್ತು ಪ್ರಾಮಾಣಿಕ ಮಾತುಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲೀನ ವಿಶ್ವಾಸವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಮಂತ್ರಿಯವರು ಮನವಿ ಮಾಡಿದರು ಮತ್ತು ರಾಜತಾಂತ್ರಿಕ ಮಾತುಕತೆಗಳು ಹಾಗೂ ಸಂವಾದದ ಹಾದಿಗೆ ಮರಳಲು ಎಲ್ಲಾ ನಿಟ್ಟಿನಿಂದ ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು.

ಉಕ್ರೇನ್‌ ನಲ್ಲಿರುವ ಭಾರತೀಯ ನಾಗರಿಕರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತಂತೆ ಭಾರತದ ಕಳಕಳಿಯ ಬಗ್ಗೆ ರಷ್ಯಾದ ಅಧ್ಯಕ್ಷರಿಗೆ ಪ್ರಧಾನಮಂತ್ರಿಯವರು ಸೂಕ್ಷ್ಮಸಂವೇದನೆ ವ್ಯಕ್ತಪಡಿಸಿದರು ಮತ್ತು ಅವರೆಲ್ಲರ ಸುರಕ್ಷಿತ ನಿರ್ಗಮನ ಹಾಗೂ ಭಾರತಕ್ಕೆ ಮರಳಿ ಕರೆಸಿಕೊಳ್ಳುವ ಕುರಿತು ಭಾರತವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ತಿಳಿಸಿದರು.

ತಮ್ಮ ಅಧಿಕಾರಿಗಳು ಮತ್ತು ರಾಜತಾಂತ್ರಿಕ ತಂಡಗಳು ವಿಷಯಾಧಾರಿತ ಹಿತಾಸಕ್ತಿಯ ವಿಷಯಗಳ ಬಗ್ಗೆ ನಿಯಮಿತ ಸಂಪರ್ಕಗಳನ್ನು ಮುಂದುವರಿಸುವುದಕ್ಕೆ ಇಬ್ಬರೂ ನಾಯಕರು ಸಮ್ಮತಿಸಿದರು.

***


(Release ID: 1801003) Visitor Counter : 272