ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 25 FEB 2022 10:34PM by PIB Bengaluru

ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ; "ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಹೇಮಾನಂದ ಬಿಸ್ವಾಲ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದರು ಮತ್ತು ಜನರ ನಡುವೆ ವ್ಯಾಪಕವಾಗಿ ಕೆಲಸ ಮಾಡಿದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ." ಎಂದಿದ್ದಾರೆ.

***(Release ID: 1801332) Visitor Counter : 196