ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಎಡ್ವರ್ಡ್ ಹೆಗರ್ ಅವರ ನಡುವೆ ದೂರವಾಣಿ ಸಂಭಾಷಣೆ
Posted On:
28 FEB 2022 10:18PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಎಡ್ವರ್ಡ್ ಹೆಗರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.
ಉಕ್ರೇನ್‌ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸ್ಲೋವಾಕ್ ಗಣರಾಜ್ಯ ನೀಡಿದ ಸಹಾಯಕ್ಕಾಗಿ ಮತ್ತು ಭಾರತದಿಂದ ತೆರಳಿದ ವಿಶೇಷ ವಿಮಾನಗಳಿಗೆ ಅನುಮತಿ ನೀಡಿದ್ದಕ್ಕಾಗಿ ಘನತೆವೆತ್ತ ಎಡ್ವರ್ಡ್ ಹೆಗರ್ ಅವರಿಗೆ ಪ್ರಧಾನಿ ಧನ್ಯವಾದ ಅರ್ಪಿಸಿದರು. ಮುಂದಿನ ಕೆಲವು ದಿನಗಳಲ್ಲಿ ಸ್ಲೋವಾಕ್ ಗಣರಾಜ್ಯದ ನಿರಂತರ ಸಹಾಯಕ್ಕಾಗಿ ಅವರು ಮನವಿ ಮಾಡಿದರು. ಜೊತೆಗೆ ಸಂಘರ್ಷ ವಲಯಗಳಿಂದ ಇತರ ನಾಗರಿಕರನ್ನು ಸ್ಥಳಾಂತರಿಸಲು ಭಾರತ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಭಾರತೀಯ ನಾಗರಿಕರ ಸ್ಥಳಾಂತರ ಪ್ರಯತ್ನಗಳ ಮೇಲ್ವಿಚಾರಣೆಗಾಗಿ ಕಾನೂನು ಮತ್ತು ನ್ಯಾಯ ಸಚಿವ ಶ್ರೀ ಕಿರಣ್ ರಿಜಿಜು ಅವರನ್ನು ತಮ್ಮ ವಿಶೇಷ ಪ್ರತಿನಿಧಿಯಾಗಿ ನಿಯೋಜಿಸುವ ಬಗ್ಗೆಯೂ ಪ್ರಧಾನಮಂತ್ರಿಯವರು ಶ್ರೀ ಹೆಗರ್ ಅವರಿಗೆ ಮಾಹಿತಿ ನೀಡಿದರು.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ಪ್ರಧಾನಿ, ಹಗೆತನವನ್ನು ನಿಲ್ಲಿಸಲು ಮತ್ತು ಮಾತುಕತೆಗೆ ಮರಳಲು ಭಾರತದ ಮಾಡುತ್ತಿರುವ ನಿರಂತರ ಮನವಿಯನ್ನು ಪುನರುಚ್ಚರಿಸಿದರು. ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.
***
(Release ID: 1802259)
Visitor Counter : 161
Read this release in:
Urdu
,
English
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam