ಪ್ರಧಾನ ಮಂತ್ರಿಯವರ ಕಛೇರಿ
ಉಕ್ರೇನ್ ನ ಗೌರವಾನ್ವಿತ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ಸಮಾಲೋಚನೆ
प्रविष्टि तिथि:
07 MAR 2022 12:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಉಕ್ರೇನ್ ನ ಗೌರವಾನ್ವಿತ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಅಧ್ಯಕ್ಷ ಝೆಲೆನ್ಸ್ಕಿ ಅವರು ಸಂಘರ್ಷದ ಪರಿಸ್ಥಿತಿ ಮತ್ತು ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಪ್ರಧಾನಮಂತ್ರಿ ಅವರಿಗೆ ವಿಸ್ತೃತವಾಗಿ ವಿವರಿಸಿದರು. ಸಂಘರ್ಷ ನಡೆಯುತ್ತಿರುವುದು ಮತ್ತು ಅದರ ಪರಿಣಾಮವಾಗಿ ಉದ್ಬವಿಸಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಮಂತ್ರಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಬೇಕೆಂಬ ತಮ್ಮ ಕರೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು ಭಾರತವು ಸದಾ ಸಮಸ್ಯೆಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಮತ್ತು ಉಭಯ ಪಕ್ಷಗಳ ನಡುವೆ ನೇರ ಮಾತುಕತೆಯ ಪರವಾಗಿ ನಿಂತಿದೆ ಎಂದು ಹೇಳಿದರು.
ಉಕ್ರೇನ್‌ನಿಂದ 20000ಕ್ಕೂ ಅಧಿಕ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಉಕ್ರೇನಿಯನ್ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಧನ್ಯವಾದ ಸಲ್ಲಿಸಿದರು. ಉಕ್ರೇನ್‌ನಲ್ಲಿ ಇನ್ನೂ ಉಳಿದಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭಧ್ರತೆಯ ಬಗ್ಗೆ ಅವರು ತೀವ್ರ ಕಾಳಜಿಯನ್ನು ವ್ಯಕ್ತಪಡಿಸಿದರು ಮತ್ತು ಅವರ ತ್ವರಿತ ಮತ್ತು ಸುರಕ್ಷಿತ ಸ್ಥಳಾಂತರ ಅಗತ್ಯತೆಯನ್ನು ಬಲವಾಗಿ ಪ್ರತಿಪಾದಿಸಿದರು.
***
(रिलीज़ आईडी: 1803553)
आगंतुक पटल : 256
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam