ಪ್ರಧಾನ ಮಂತ್ರಿಯವರ ಕಛೇರಿ
ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
Posted On:
08 MAR 2022 9:44PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಉಭಯ ನಾಯಕರು ಉಕ್ರೇನ್ ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಚರ್ಚಿಸಿದರು ಮತ್ತು ಉಕ್ರೇನ್ ನಲ್ಲಿ ಮಾನವೀಯ ಸ್ಥಿತಿಗತಿ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದರು. ಯುದ್ಧವನ್ನು ನಿಲ್ಲಿಸಲು ಮತ್ತು ಮಾತುಕತೆಯು ರಾಜತಾಂತ್ರಿಕ ಹಾದಿಗೆ ಮರಳಲು ಭಾರತ ಮಾಡುತ್ತಿರುವ ನಿರಂತರ ಮನವಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದರು.
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಮಾತುಕತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು ಮತ್ತು ಆದಷ್ಟು ಬೇಗ ಇದಕ್ಕೆ ಪರಿಹಾರ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು.
ಸಂಘರ್ಷದ ಪ್ರದೇಶದಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುತ್ತಿರುವ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಸಂಕಷ್ಟದಲ್ಲಿರುವ ಜನರಿಗೆ ಔಷಧಗಳು ಸೇರಿದಂತೆ ತುರ್ತು ಪರಿಹಾರ ಸಾಮಗ್ರಿಗಳ ರೂಪದಲ್ಲಿ ಭಾರತ ನೆರವು ನೀಡುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು 2021 ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿ ರುಟ್ಟೆ ಅವರೊಂದಿಗೆ ವರ್ಚುವಲ್ ಮೂಲಕ ನಡೆದ ಮಾತುಕತೆಯನ್ನು ಪ್ರಧಾನಮಂತ್ರಿ ಅವರು ಸ್ಮರಿಸಿದರು ಮತ್ತು ಶೀಘ್ರದಲ್ಲೇ ಪ್ರಧಾನಿ ರುಟ್ಟೆ ಅವರನ್ನು ಭಾರತದಲ್ಲಿ ಸ್ವಾಗತಿಸುವ ಬಯಕೆಯನ್ನು ವ್ಯಕ್ತಪಡಿಸಿದರು.
***
(Release ID: 1804260)
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam