ಪ್ರಧಾನ ಮಂತ್ರಿಯವರ ಕಛೇರಿ

ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಸಾಧಿಸಿರುವ ಚುನಾಯಿತ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

Posted On: 10 MAR 2022 10:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಸಾಧಿಸಿರುವ ಚುನಾಯಿತ ಅಧ್ಯಕ್ಷ ಯೂನ್ ಸುಕ್-ಯೋಲ್ ಅವರನ್ನು ಅಭಿನಂದಿಸಿದ್ದಾರೆ.
 
ಟ್ವೀಟ್‌ ನಲ್ಲಿ ಪ್ರಧಾನಮಂತ್ರಿಯವರು;
 
"ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಸಾಧಿಸಿರುವ ಚುನಾಯಿತ ಅಧ್ಯಕ್ಷ ಯೂನ್ ಸುಕ್-ಯೋಲ್ ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತ-ಆರ್.ಓ.ಕೆ. ನಡುವಿನ ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಮತ್ತು ಬಲಪಡಿಸುವ ನಿಟ್ಟಿನಲ್ಲಿ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ". ಎಂದು ತಿಳಿಸಿದ್ದಾರೆ.


***(Release ID: 1804993) Visitor Counter : 148