ಪ್ರಧಾನ ಮಂತ್ರಿಯವರ ಕಛೇರಿ
ಉಕ್ರೇನ್-ರಷ್ಯಾ ಯುದ್ಧ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಸ್ತುತ ಜಾಗತಿಕ ಸನ್ನಿವೇಶಗಳ ಕುರಿತು ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಭೆಯಲ್ಲಿ ಮರಾಮರ್ಶೆ
प्रविष्टि तिथि:
13 MAR 2022 2:29PM by PIB Bengaluru
ರಷ್ಯಾ-ಉಕ್ರೇನ್ ಸಂಘರ್ಷ ಸಂದರ್ಭದಲ್ಲಿ ಭಾರತದ ರಕ್ಷಣಾ ಪಡೆಗಳ ಭದ್ರತಾ ಸನ್ನದ್ಧತೆ ಮತ್ತು ಸಮಕಾಲೀನ ಜಾಗತಿಕ ಸನ್ನಿವೇಶಗಳನ್ನು ಪರಿಶೀಲಿಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತೆಗೆ ಸಂಬಂಧಿಸಿದ ಕೇಂದ್ರ ಸಂಪಟ ಸಭೆ ನಡೆಯಿತು.
ದೇಶದ ಗಡಿ ಪ್ರದೇಶಗಳಲ್ಲಿ, ಸಾಗರ ಭಾಗ ಮತ್ತು ವಾಯು ನೆಲೆಯಲ್ಲಿ ರಕ್ಷಣಾ ಪಡೆಗಳ ಭದ್ರತಾ ಸನ್ನದ್ಧತೆಯ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ವಿವಿಧ ಸಿದ್ಧತಾ ಕ್ರಮಗಳ ಕುರಿತು ಪ್ರಧಾನಿ ಅವರು ಸಭೆಯಲ್ಲಿ ಮಾಹಿತಿ ಕಲೆ ಹಾಕಿದರು.
ನೆರೆ ಹೊರೆಯ ರಾಷ್ಟ್ರಗಳ ಕೆಲವು ನಾಗರಿಕರೊಂದಿಗೆ ಭಾರತೀಯ ಪ್ರಜೆಗಳನ್ನು ಉಕ್ರೇನ್ ನಿಂದ ಸ್ಥಳಾಂತರಿಸಲು ನಡೆಸುತ್ತಿರುವ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯ ವಿವರಗಳು ಹಾಗೂ ಉಕ್ರೇನ್‌ನ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರಧಾನ ಮಂತ್ರಿ ಅವರಿಗೆ ಸಭೆಯಲ್ಲಿ ವಿವರ ನೀಡಲಾಯಿತು.
ಖಾರ್ಕಿವ್‌ನಲ್ಲಿ ನಿಧನರಾದ ನವೀನ್ ಶೇಖರಪ್ಪ ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
***
(रिलीज़ आईडी: 1805561)
आगंतुक पटल : 278
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam