ಪ್ರಧಾನ ಮಂತ್ರಿಯವರ ಕಛೇರಿ
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶ್ರೀ ಆರ್ ಸಿ ಲಹೋಟಿ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
24 MAR 2022 9:10AM by PIB Bengaluru
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶ್ರೀ ಆರ್.ಸಿ. ಲಹೋಟಿ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;
“ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶ್ರೀ ಆರ್.ಸಿ. ಲಹೋಟಿ ನಿಧನದಿಂದ ದುಃಖ ಉಂಟಾಗಿದೆ. ನ್ಯಾಯಾಂಗ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಸ್ಮರಣೀಯ. ಹಿಂದುಳಿದವರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ಅವರು ತ್ವರಿತ ನ್ಯಾಯ ಒದಗಿಸಲು ಒತ್ತು ನೀಡುತ್ತಿದ್ದರು. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪಗಳು. ಓಂ ಶಾಂತಿ.”
***
(ಪ್ರಕಟಣೆ ಐ.ಡಿ.: 1809044)
ವಿಸಿಟರ್ ಕೌಂಟರ್ : 232
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam