ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ; ಸಂತ್ರಸ್ತರಿಗೆ ಪಿಎಂಎನ್ ಆರ್ ಎಫ್ ನಿಂದ ಪರಿಹಾರಕ್ಕೆ ಅನುಮೋದನೆ

प्रविष्टि तिथि: 27 MAR 2022 12:41PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಅಲ್ಲದೆ, ಪ್ರಧಾನಮಂತ್ರಿ ಅವರು ಅಪಘಾತದಿಂದ ಮೃತ ಕುಟುಂಬದವರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ ಆರ್ ಎಫ್ )ಯಡಿ ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಜನರು ಮೃತಪಟ್ಟಿರುವುದಕ್ಕೆ ತುಂಬಾ ದುಃಖವಾಗುತ್ತಿದೆ. ಮೃತದ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ.

ಪಿಎಂಎನ್ ಆರ್ ಎಫ್ ನಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು:PM @narendramodi"

 

***


(रिलीज़ आईडी: 1810289) आगंतुक पटल : 226
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam