ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರೀಕ್ಷಾ ಪೇ ಚರ್ಚಾ ಕುರಿತ ಲಕ್ಷಾಂತರ ಜನರ ಉತ್ಸಾಹ ಶ್ಲಾಘಿಸಿದ ಪ್ರಧಾನಿ

Posted On: 30 MAR 2022 10:05AM by PIB Bengaluru

ಈ ವರ್ಷದ ‘ಪರೀಕ್ಷಾ ಪೇ ಚರ್ಚಾ’ ಬಗ್ಗೆ ತಮ್ಮ ಅಮೂಲ್ಯವಾದ ಒಳನೋಟಗಳನ್ನು ಹಂಚಿಕೊಂಡಿರುವ ಲಕ್ಷಾಂತರ ಜನರ ಉತ್ಸಾಹವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪರೀಕ್ಷಾ ಪೇ ಚರ್ಚಾದಲ್ಲಿ ಸಹಕರಿಸಿದ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
"ಈ ವರ್ಷದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಬಗ್ಗೆ ಜನರ ಉತ್ಸಾಹವು ಅಸಾಧಾರಣವಾಗಿದೆ. ಲಕ್ಷಾಂತರ ಜನರು ತಮ್ಮ ಅಮೂಲ್ಯವಾದ ಒಳನೋಟಗಳು ಮತ್ತು ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೊಡುಗೆ ನೀಡಿದ ಎಲ್ಲ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ನಾನು ಧನ್ಯವಾದಗಳು.
ಏಪ್ರಿಲ್ 1 ರಂದು ಜರುಗಲಿರುವ ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ತಿಳಿಸಿದ್ದಾರೆ.

 

***


(Release ID: 1811293) Visitor Counter : 187