ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತ- ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಂಡ್ ಆಸ್ ಇಸಿಟಿಎ) ಸಹಿ ಹಾಕಿದ ವರ್ಚುವಲ್ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

Posted On: 02 APR 2022 2:20PM by PIB Bengaluru

ಪ್ರಧಾನಮಂತ್ರಿ ಮಾರಿಸನ್ , 

ಭಾರತ ಮತ್ತು ಆಸ್ಟ್ರೇಲಿಯಾದ ವಾಣಿಜ್ಯ ಸಚಿವರೇ, 
ಮತ್ತು ಇಲ್ಲಿ ಸೇರಿರುವ ಉಭಯ ದೇಶಗಳ ನನ್ನೆಲ್ಲಾ ಮಿತ್ರರೇ, 

ನಮಸ್ಕಾರ!
ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಇಂದು, ಇದು ನನ್ನ ಸ್ನೇಹಿತ ಸ್ಕಾಟ್‌ ಅವರೊಂದಿಗೆ ನನ್ನ ಮೂರನೇ ಮುಖಾಮುಖಿ ಸಂವಾದವಾಗಿದೆ. ಕಳೆದ ವಾರ ವರ್ಚುವಲ್ ಶೃಂಗಸಭೆಯಲ್ಲಿ ನಾವು ಬಹಳ ಫಲಪ್ರದ ಚರ್ಚೆ ನಡೆಸಿದ್ದೇವು. ಆ  ವೇಳೆ, ನಾವು ನಮ್ಮ ತಂಡಗಳಿಗೆ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಶೀಘ್ರವಾಗಿ ಅಂತಿಮಗೊಳಿಸುವಂತೆ ಸೂಚಿಸಿದ್ದೇವೆ ಮತ್ತು ಇಂದು ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಅಸಾಧಾರಣ ಸಾಧನೆಗಾಗಿ, ನಾನು ಎರಡೂ ದೇಶಗಳ ವಾಣಿಜ್ಯ ಮಂತ್ರಿಗಳು ಮತ್ತು ಅವರ ಅಧಿಕಾರಿಗಳನ್ನು ಹೃದಯ ಪೂರ್ವಕವಾಗಿ ಅಭಿನಂದಿಸುತ್ತೇನೆ.

ನಾನು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಮತ್ತು ಪ್ರಧಾನಿ ಮಾರಿಸನ್ ಅವರ ಸದ್ಯದ ವ್ಯಾಪಾರ ಪ್ರತಿನಿಧಿಯಾಗಿರುವ ಶ್ರೀ ಟೋನಿ ಅಬ್ಬೋಟ್ ಅವರನ್ನು ವಿಶೇಷವಾಗಿ ಅಭಿನಂದಿಸಲು ಬಯಸುತ್ತೇನೆ. ಅವರ ಪ್ರಯತ್ನಗಳು ಈ ಪ್ರಕ್ರಿಯೆಗೆ ವೇಗ ನೀಡುವಲ್ಲಿ ಮಹತ್ವದ ಕೊಡುಗೆ ನೀಡಿವೆ. 


ಮಿತ್ರರೇ,


ಅತ್ಯಲ್ಪ ಅವಧಿಯಲ್ಲಿ ಅಂತಹ ಮಹತ್ವದ ಒಪ್ಪಂದದ ತೀರ್ಮಾನವು ಉಭಯ ದೇಶಗಳ ನಡುವೆ ಪರಸ್ಪರ ನಂಬಿಕೆ ಎಷ್ಟು ಗಾಡವಾಗಿದೆ ಎಂಬುದನ್ನು ತೋರುತ್ತದೆ. ನಮ್ಮ ದ್ವಿಪಕ್ಷೀಯ ಬಾಂಧವ್ಯಕ್ಕೆ ಇದು ನಿಜಕ್ಕೂ ಐತಿಹಾಸಿಕ ಕ್ಷಣವಾಗಿದೆ. ನಮ್ಮ ಆರ್ಥಿಕತೆಗಳು ಪರಸ್ಪರರ ಅಗತ್ಯಗಳನ್ನು ಈಡೇರಿಸಲು ಹೆಚ್ಚಿನ ಸಾಮರ್ಥ್ಯವನ್ನು ಹೊಂದಿವೆ. ಈ ಒಪ್ಪಂದದ ಮೂಲಕ ನಾವು ಈ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ ಎಂಬ ಖಾತ್ರಿ ನನಗಿದೆ. 
ಈ ಒಪ್ಪಂದವು ನಮಗೆ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಪ್ರವಾಸಿಗರನ್ನು ವಿನಿಮಯ ಮಾಡಿಕೊಳ್ಳುವುದನ್ನು ಸುಗಮಗೊಳಿಸುತ್ತದೆ ಮತ್ತು ಈ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ. ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ – ‘ಇಂಡ್- ಆಸ್ ಇಸಿಟಿಎ’ ಯ ಪರಿಣಾಮಕಾರಿ ಮತ್ತು ಯಶಸ್ವಿ ಮಾತುಕತೆಗಾಗಿ ಎರಡು ದೇಶಗಳ ತಂಡಗಳನ್ನು ನಾನು ಮತ್ತೊಮ್ಮೆ ಅಭಿನಂದಿಸುತ್ತೇನೆ. 
ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕಾಗಿ ಪ್ರಧಾನ ಮಂತ್ರಿ ಮಾರಿಸನ್ ಅವರಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು ಮತ್ತು ಆಸ್ಟ್ರೇಲಿಯಾದಲ್ಲಿ ಮುಂಬರುವ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಲು ನನ್ನ ಶುಭಾಶಯಗಳು. ಮತ್ತು ನಾಳೆ ನಡೆಯಲಿರುವ ವಿಶ್ವಕಪ್ ಫೈನಲ್‌ ಗಾಗಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡಕ್ಕೆ ನನ್ನ ಶುಭಾಶಯಗಳು. 


ನಮಸ್ಕಾರ!

ಘೋಷಣೆ; ಇದು ಪ್ರಧಾನಮಂತ್ರಿಗಳ ಭಾಷಣದ ಯಥಾವತ್ ಅನುವಾದವಲ್ಲ, ಅವರು ಮೂಲತಃ ಹಿಂದಿಯಲ್ಲಿ ಭಾಷಣ ಮಾಡಿದರು. 
 

***


(Release ID: 1812841) Visitor Counter : 265