ಪ್ರಧಾನ ಮಂತ್ರಿಯವರ ಕಛೇರಿ
ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
ಪ್ರಕಟಣಾ ದಿನಾಂಕ:
01 APR 2022 7:01PM by PIB Bengaluru
ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಶ್ರೀ ಲಾವ್ರೊವ್ ಅವರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ಸೇರಿದಂತೆ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಹಿಂಸಾಚಾರವನ್ನು ಶೀಘ್ರವಾಗಿ ನಿಲ್ಲಿಸಬೇಕೆಂಬ ತಮ್ಮ ಕರೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು ಮತ್ತು ಶಾಂತಿ ಪ್ರಯತ್ನಗಳಿಗೆ ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಭಾರತವು ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು.
ಡಿಸೆಂಬರ್ 2021 ರಲ್ಲಿ ನಡೆದ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಪ್ರಗತಿಯ ಬಗ್ಗೆ ರಷ್ಯಾದ ವಿದೇಶಾಂಗ ಸಚಿವರು ಪ್ರಧಾನಮಂತ್ರಿಯವರಲ್ಲಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು
***
(ಪ್ರಕಟಣೆ ಐ.ಡಿ.: 1812844)
ವಿಸಿಟರ್ ಕೌಂಟರ್ : 225
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam