ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರೀಯ ಕಡಲ ದಿನದಂದು ಪ್ರಧಾನಮಂತ್ರಿಯವರು ಭಾರತದ ವೈಭವದ ಕಡಲ ಇತಿಹಾಸವನ್ನು ಸ್ಮರಿಸಿದ್ದಾರೆ

Posted On: 05 APR 2022 10:07AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕಡಲ ದಿನದಂದು ಭಾರತದ ವೈಭವದ ಕಡಲ ಇತಿಹಾಸವನ್ನು ನೆನಪಿಸಿಕೊಂಡಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ಕಡಲ ವಲಯದ ಪ್ರಾಮುಖ್ಯತೆಯನ್ನು ತಿಳಿಸಿದ ಅವರು, ಕಳೆದ 8 ವರ್ಷಗಳಲ್ಲಿ ಭಾರತ ಸರ್ಕಾರ ಬಂದರು ನೇತೃತ್ವದ ಅಭಿವೃದ್ಧಿಗೆ ಗಮನ ಹರಿಸಿದೆ. ಇದು ಆರ್ಥಿಕ ಬೆಳವಣಿಗೆಗೆ ಮತ್ತು ಆತ್ಮನಿರ್ಭರ ಭಾರತವನ್ನು ನಿರ್ಮಿಸಲು ಅವಶ್ಯಕವಾಗಿದೆ. ಸಮುದ್ರ ಪರಿಸರ ವ್ಯವಸ್ಥೆ ಮತ್ತು ವೈವಿಧ್ಯತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರ ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಪ್ರಧಾನಿ ಅವರು;

"ಇಂದು, ರಾಷ್ಟ್ರೀಯ ಕಡಲ ದಿನದಂದು ನಾವು ನಮ್ಮ ವೈಭವದ ಕಡಲ ಇತಿಹಾಸವನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಭಾರತದ ಆರ್ಥಿಕ ಬೆಳವಣಿಗೆಯ ಕಡೆಗೆ ಕಡಲ ಕ್ಷೇತ್ರದ ಪ್ರಾಮುಖ್ಯತೆಯನ್ನು ಬಿಂಬಿಸುತ್ತೇವೆ. ಕಳೆದ 8 ವರ್ಷಗಳಲ್ಲಿ ನಮ್ಮ ಕಡಲ ಕ್ಷೇತ್ರವು ಹೊಸ ಎತ್ತರಕ್ಕೆ ಏರಿದೆ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಉತ್ತೇಜಿಸಲು ಕೊಡುಗೆ ನೀಡಿದೆ."

"ಕಳೆದ 8 ವರ್ಷಗಳಲ್ಲಿ ಭಾರತ ಸರ್ಕಾರವು ಬಂದರು-ನೇತೃತ್ವದ ಅಭಿವೃದ್ಧಿಯತ್ತ ಗಮನಹರಿಸಿದೆ, ಇದು ಬಂದರು ಸಾಮರ್ಥ್ಯಗಳನ್ನು ವಿಸ್ತರಿಸುವುದು ಮತ್ತು ಅಸ್ತಿತ್ವದಲ್ಲಿರುವ ವ್ಯವಸ್ಥೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವುದನ್ನು ಒಳಗೊಂಡಿರುತ್ತದೆ. ಭಾರತೀಯ ಉತ್ಪನ್ನಗಳು ಹೊಸ ಮಾರುಕಟ್ಟೆಗಳಿಗೆ ಪ್ರವೇಶವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಜಲಮಾರ್ಗಗಳನ್ನು ಬಳಸಿಕೊಳ್ಳಲಾಗುತ್ತಿದೆ."

"ನಾವು ಆರ್ಥಿಕ ಪ್ರಗತಿಗಾಗಿ ಕಡಲ ವಲಯವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವಾಗ ಮತ್ತು ಆತ್ಮನಿರ್ಭರ ಭಾರತವನ್ನು ನಿರ್ಮಿಸುತ್ತಿರುವಾಗ, ಭಾರತವು ಹೆಮ್ಮೆಪಡುವ ಸಮುದ್ರ ಪರಿಸರ ವ್ಯವಸ್ಥೆ ಮತ್ತು ವೈವಿಧ್ಯತೆಯನ್ನು ರಕ್ಷಿಸಲು ನಾವು ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳುತ್ತಿದ್ದೇವೆ." ಎಂದಿದ್ದಾರೆ.

****

 



(Release ID: 1813648) Visitor Counter : 185