ಪ್ರಧಾನ ಮಂತ್ರಿಯವರ ಕಛೇರಿ
ಜ್ಯೋತಿಬಾ ಫುಲೆ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
11 APR 2022 10:10AM by PIB Bengaluru
ಪ್ರಧಾನಮಂತ್ರಿ ಅವರು ಶ್ರೇಷ್ಠ ಸಾಮಾಜಿಕ ಸುಧಾರಕ, ತತ್ವಜ್ಞಾನಿ ಮತ್ತು ಬರಹಗಾರರಾದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ಮಹಾತ್ಮ ಫುಲೆ ಅವರು ಸಾಮಾಜಿಕ ನ್ಯಾಯದ ಹರಿಕಾರ (ಚಾಂಪಿಯನ್ ) ಹಾಗೂ ಅಸಂಖ್ಯಾತ ಜನರ ಭರವಸೆಯ ಮೂಲ ಎಂದೇ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ ಎಂದ ಶ್ರೀ ನರೇಂದ್ರ ಮೋದಿ, ಸಾಮಾಜಿಕ ಸಮಾನತೆ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅವರು ಅವಿರತವಾಗಿ ದುಡಿದರು ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶ್ರೇಷ್ಠ ಚಿಂತಕ ಜ್ಯೋತಿಬಾ ಫುಲೆ ಅವರ ಕುರಿತಂತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದರು. ಆಗ ಶ್ರೀ ನರೇಂದ್ರ ಮೋದಿ ಅವರು, ಮಹಾತ್ಮ ಫುಲೆ ಅವರು ಹೆಣ್ಣುಮಕ್ಕಳಿಗಾಗಿ ಶಾಲೆಗಳನ್ನು ತೆರೆದರು ಮತ್ತು ಹೆಣ್ಣು ಶಿಶುಗಳ ಹತ್ಯೆ ವಿರುದ್ಧ ಧ್ವನಿ ಎತ್ತಿದ್ದರು ಹಾಗೂ ಜಲ ಬಿಕ್ಕಟ್ಟು ಪರಿಹರಿಸಲು ಅಭಿಯಾನಗಳನ್ನು ನಡೆಸಿದರು ಎಂದು ಹೇಳಿದ್ದರು.
ಪ್ರಧಾನಮಂತ್ರಿ ಅರು ತಮ್ಮ ಸರಣಿ ಟ್ವೀಟ್ ಗಳಲ್ಲಿ ಹೀಗೆ ಹೇಳಿದ್ದಾರೆ.
“ಮಹಾತ್ಮ ಫುಲೆ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಮತ್ತು ಅಸಂಖ್ಯಾತ ಜನರಿಗೆ ಭರವಸೆಯ ಮೂಲ ಎಂದು ವ್ಯಾಪಕವಾಗಿ ಗೌರವಿಸಲಾಗುತ್ತದೆ. ಸಾಮಾಜಿಕ ಸಮಾನತೆ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ ಅವಿರತವಾಗಿ ಶ್ರಮಿಸಿದ ಬಹುಮುಖ ವ್ಯಕ್ತಿತ್ವ ಅವರದು. ಅವರ ಜಯಂತಿಯಂದು ಅವರಿಗೆ ನಮನಗಳು’’
“ಇಂದು ಮಹಾತ್ಮ ಫುಲೆಯವರ ಜಯಂತಿ ಮತ್ತು ಇನ್ನು ಕೆಲವೇ ದಿನಗಳಲ್ಲಿ 14 ರಂದು ನಾವು ಅಂಬೇಡ್ಕರ್ ಜಯಂತಿ ಆಚರಿಸುತ್ತೇವೆ. ಕಳೆದ ತಿಂಗಳ ಮನ್ ಕಿ ಬಾತ್ ನಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಮಹಾತ್ಮ ಫುಲೆ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಮರಣೀಯ ಕೊಡುಗೆಗಾಗಿ ಭಾರತವು ಎಂದೆಂದಿಗೂ ಕೃತಜ್ಞವಾಗಿರುತ್ತದೆ’’.
*****
(Release ID: 1815628)
Visitor Counter : 270
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam