ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ನ ಭೂರಚ್ ನಲ್ಲಿ ನಡೆದ ಕಾರ್ಖಾನೆ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ
ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
Posted On:
11 APR 2022 2:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಭರೂಚ್ ನಲ್ಲಿ ನಡೆದ ಕಾರ್ಖಾನೆ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ ಆರ್ ಎಫ್ )ಯಿಂದ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿಗಳ ಟ್ವೀಟ್ ನಲ್ಲಿ ಹೀಗೆ ತಿಳಿಸಲಾಗಿದೆ.
“ಭರೂಚ್ ನಲ್ಲಿ ನಡೆದ ಕಾರ್ಖಾನೆ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು’’
******
(Release ID: 1815690)
Visitor Counter : 189
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam