ಪ್ರಧಾನ ಮಂತ್ರಿಯವರ ಕಛೇರಿ
ಪಾಕಿಸ್ತಾನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
प्रविष्टि तिथि:
11 APR 2022 11:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ್ದಾರೆ. ಭಾರತವು ನೆರೆಹೊರೆಯ ನೆಲದಲ್ಲಿ ಭಯೋತ್ಪಾದನೆ ಮುಕ್ತ ಶಾಂತಿ ಮತ್ತು ಸ್ಥಿರತೆ ಬಯಸುತ್ತದೆ. ಇದರಿಂದ ಎರಡೂ ದೇಶಗಳು ತನ್ನ ಅಭಿವೃದ್ಧಿ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುತ್ತದೆ ಶ್ರೀ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ;
"ಪಾಕಿಸ್ತಾನ ನೂತನ ಪ್ರಧಾನಿಯಾಗಿ ಆಯ್ಕೆಯಾದ ಘನತೆವೆತ್ತ ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಬಹುದು. ಜತೆಗೆ, ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿ ಖಚಿತಪಡಿಸಿಕೊಳ್ಳಬಹುದು" ಎಂದಿದ್ದಾರೆ.
******
(रिलीज़ आईडी: 1815905)
आगंतुक पटल : 450
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam