ಪ್ರಧಾನ ಮಂತ್ರಿಯವರ ಕಛೇರಿ
ಕೋವಿಡ್ – 19 ಪರಿಸ್ಥಿತಿ ಮತ್ತು ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿ.ಎ.ಪಿ.ಎಸ್ ನ ಪರಿಹಾರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
16 APR 2022 6:35PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿರಿಯ ಬಿ.ಎ.ಪಿ.ಎಸ್. ಸಾಧುಗಳು, ಈಶ್ವರ್ ಚರಣ್ ಸ್ವಾಮಿ ಮತ್ತು ಬ್ರಹ್ಮವಿಹಾರಿ ಸ್ವಾಮಿಗಳನ್ನು ಭೇಟಿ ಮಾಡಿದರು. ಕೋವಿಡ್ – 19 ಪರಿಸ್ಥಿತಿ ಮತ್ತು ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿ.ಎ.ಪಿ.ಎಸ್ ನಿಂದ ಕೈಗೊಂಡ ಪರಿಹಾರ ಕಾರ್ಯಕ್ಕೆ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಎಚ್.ಎಚ್. ಪ್ರಮುಖ್ ಸ್ವಾಮಿ ಮಹಾರಾಜ್ ಜಿ ಅವರ ಜನ್ಮ ಶತಮಾನೋತ್ಸವ ಸಮಾರಂಭ ಕುರಿತು ಚರ್ಚಿಸಿದರು.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, “ಬಿ.ಎ.ಪಿ.ಎಸ್.ನ ಹಿರಿಯ ಸಾಧುಗಳು, ಈಶ್ವರ್ ಚರಣ್ ಸ್ವಾಮಿ ಮತ್ತು ಬ್ರಹ್ಮ ವಿಹಾರಿ ಸ್ವಾಮಿಗಳನ್ನು ಭೇಟಿ ಮಾಡಿದೆ. ಕೋವಿಡ್ -19 ಪರಿಸ್ಥಿತಿ ಮತ್ತು ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಎಚ್.ಎಚ್. ಪ್ರಮುಖ್ ಸ್ವಾಮಿ ಮಹಾರಾಜ್ ಜಿ ಅವರ ಜನ್ಮ ಶತಮಾನೋತ್ಸವ ಸಮಾರಂಭ ಕುರಿತು ಚರ್ಚಿಸಲಾಯಿತು ಮತ್ತು ಸಮಾಜಕ್ಕೆ ಅವರು ನೀಡಿದ ಶ್ರೀಮಂತ ಕೊಡುಗೆಯನ್ನು ಸ್ಮರಿಸಲಾಯಿತು” ಎಂದು ಹೇಳಿದ್ದಾರೆ.
*****
(ಪ್ರಕಟಣೆ ಐ.ಡಿ.: 1817419)
ವಿಸಿಟರ್ ಕೌಂಟರ್ : 166
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu