ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಿ ಚಂದ್ರಶೇಖರ್ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 17 APR 2022 8:47AM by PIB Bengaluru

ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅವರ ಬದ್ಧತೆ ಮತ್ತು ಬಡತನ ನಿರ್ಮೂಲನೆ ಮಾಡುವ ಪ್ರಯತ್ನಗಳಿಗಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟ ಚಂದ್ರ ಶೇಖರ್ ಜೀ ಅವರದ್ದು ಶ್ರೇಷ್ಠ ವ್ಯಕ್ತಿತ್ವ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಮತ್ತು ಬಡತನವನ್ನು ನಿವಾರಣೆ ಮಾಡುವ ಅವರ ಬದ್ಧತೆಗಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟ ಶ್ರೇಷ್ಠ ವ್ಯಕ್ತಿತ್ವ ಚಂದ್ರಶೇಖರ್ ಜೀ ಅವರದ್ದು. ಅವರು ಸದಾ ದೀನ ದಲಿತರ ಮತ್ತು ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಶ್ರಮಿಸಿದರು. ಅವರ ಜಯಂತಿಯಂದು ಅವರಿಗೆ ನಮನಗಳು’’. 

 


******


(रिलीज़ आईडी: 1817545) आगंतुक पटल : 219
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam