ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಒಡಿಯಾ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
18 APR 2022 9:19AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಒಡಿಯಾ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರ ಶ್ರೇಷ್ಠ ಕೊಡುಗೆಗಾಗಿ ಪ್ರಫುಲ್ಲ ಕರ್ ಜಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“"ಶ್ರೀ ಪ್ರಫುಲ್ಲ ಕರ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರು ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ನೀಡಿರುವ ಶ್ರೇಷ್ಠ ಕೊಡುಗೆಗಾಗಿ ಸದಾ ಸ್ಮರಣೀಯರು. ಅವರು ಬಹುಮುಖ ವ್ಯಕ್ತಿತ್ವ ಹೊಂದಿದ್ದರು ಮತ್ತು ಅವರ ಸೃಜನಶೀಲತೆ ಅವರ ಕಾರ್ಯಗಳಲ್ಲಿ ಪ್ರತಿಫಲಿಸುತ್ತಿತ್ತು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ."
****
(ಪ್ರಕಟಣೆ ಐ.ಡಿ.: 1817664)
ವಿಸಿಟರ್ ಕೌಂಟರ್ : 226
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam