ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಜುಂಜುವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಿ ಸಂತಾಪ
ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
ಪ್ರಕಟಣಾ ದಿನಾಂಕ:
19 APR 2022 7:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಜುಂಜುವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ ಆರ್ ಎಫ್ )ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ ಹೀಗೆ ಹೇಳಿದೆ
“ರಾಜಸ್ಥಾನದ ಜುಂಜುವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ ಆರ್ ಎಫ್ )ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ PM @narendramodi’’
******
(ಪ್ರಕಟಣೆ ಐ.ಡಿ.: 1818289)
ವಿಸಿಟರ್ ಕೌಂಟರ್ : 201
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam