ಪ್ರಧಾನ ಮಂತ್ರಿಯವರ ಕಛೇರಿ
ಬೆಂಗಳೂರಿನಲ್ಲಿ ಏಪ್ರಿಲ್ 24ರಂದು, ನಾಳೆ ಉದ್ಘಾಟನೆಯಾಗಲಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಗೇಮ್ಸ್ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
प्रविष्टि तिथि:
23 APR 2022 10:06PM by PIB Bengaluru
ಏಪ್ರಿಲ್ 24 ರಂದು ಉದ್ಘಾಟನೆಗೊಳ್ಳಲಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟವು ಬೆಂಗಳೂರಿನಲ್ಲಿ ನಡೆಯುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಯುವ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಈ ಆಟಗಳು ಬಹಳ ಸಹಾಯ ಮಾಡುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ನಾಳೆ ಸಂಜೆ ಕ್ರೀಡಾಕೂಟದ ಆರಂಭದ ಕುರಿತು ತಮ್ಮ ಸಂದೇಶವನ್ನು ಹಂಚಿಕೊಳ್ಳುವುದಾಗಿಯೂ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟವು ನಾಳೆ, ಏಪ್ರಿಲ್ 24 ರಂದು ಬೆಂಗಳೂರಿನಲ್ಲಿ ಉದ್ಘಾಟನೆಯಾಗುತ್ತಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ. ಈ ಕ್ರೀಡಾಕೂಟ ಯುವ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ದೀರ್ಘಕಾಲದಲ್ಲಿ ನೆರವಾಗಲಿವೆ. ನಾಳೆ ಸಂಜೆ ಕ್ರೀಡಾಕೂಟ ಆರಂಭದ ವೇಳೆ ನಾನು ನನ್ನ ಸಂದೇಶವನ್ನು ಹಂಚಿಕೊಳ್ಳುತ್ತೇನೆ’’.
***
(रिलीज़ आईडी: 1819445)
आगंतुक पटल : 218
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam