ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡಿನ ತಂಜಾವೂರಿನಲ್ಲಿ ಸಂಭವಿಸಿದ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ.


ಜೀವ ಹಾನಿಯಾದವರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಂತಾಪ ಪರಿಹಾರ ಘೋಷಣೆ

Posted On: 27 APR 2022 9:51AM by PIB Bengaluru

ತಮಿಳುನಾಡಿನ ತಂಜಾವೂರಿನಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಬಲಿಯಾದವರ ಕುಟುಂಬಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು ಮಾಡಿದ ಸರಣಿ ಟ್ವೀಟ್ ಸಂದೇಶ ಹೀಗಿದೆ;

"ತಮಿಳುನಾಡಿನ ತಂಜಾವೂರಿನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗಿವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಆಶಿಸುತ್ತೇನೆ: ಪ್ರಧಾನಮಂತ್ರಿ"

"ತಮಿಳುನಾಡಿನ ತಂಜಾವೂರಿನಲ್ಲಿ ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸನಿಹದ ಬಂಧುಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಲಾ ರೂ. 2 ಲಕ್ಷ ನೀಡಲಾಗುವುದು. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು: ಪ್ರಧಾನಮಂತ್ರಿ"

 

 

 

***


(Release ID: 1820572) Visitor Counter : 165