ಪ್ರಧಾನ ಮಂತ್ರಿಯವರ ಕಛೇರಿ
ಏಪ್ರಿಲ್ 30 ರಂದು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟುಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಲಿದ್ದಾರೆ.
प्रविष्टि तिथि:
29 APR 2022 6:47PM by PIB Bengaluru
30 ಏಪ್ರಿಲ್, 2022 ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟುಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕಾರ್ಯಾಂಗ ಮತ್ತು ನ್ಯಾಯಾಂಗವು ಒಟ್ಟಾಗಿ ನ್ಯಾಯದ ಸರಳ ಮತ್ತು ಅನುಕೂಲಕರ ವ್ಯವಸ್ಥೆ ನಿರ್ಮಾಣಕ್ಕಾಗಿ ನಿಯಮಾವಳಿಗಳನ್ನು ರಚಿಸಲು ಮತ್ತು ನ್ಯಾಯ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳನ್ನು ಜಯಿಸಲು ಅಗತ್ಯವಾದ ಪೂರಕ ಕ್ರಮಗಳನ್ನು ಚರ್ಚಿಸಲು ಒಂದು ವಿಶೇಷ ಸಂದರ್ಭ ಈ ಜಂಟಿ ಸಮ್ಮೇಳನವಾಗಿದೆ. ಈ ಹಿಂದೆ ಇಂತಹ ಸಮ್ಮೇಳನವನ್ನು 2016 ರಲ್ಲಿ ನಡೆಸಲಾಯಿತು. ಆ ನಂತರ, ಇ-ಕೋರ್ಟ್ಸ್ ಮಿಷನ್ ಮೋಡ್ ಯೋಜನೆಯಡಿಯಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಮೂಲಸೌಕರ್ಯ ಮತ್ತು ಡಿಜಿಟಲ್ ತಂತ್ರಜ್ಞಾನದ ಏಕೀಕರಣವನ್ನು ಸುಧಾರಿಸಲು ಸರ್ಕಾರವು ವಿವಿಧ ಉಪಕ್ರಮಗಳ ವ್ಯವಸ್ಥೆಯನ್ನು ಮಾಡಿದೆ.
****
(रिलीज़ आईडी: 1821532)
आगंतुक पटल : 161
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam