ಪ್ರಧಾನ ಮಂತ್ರಿಯವರ ಕಛೇರಿ

ಈದ್-ಉಲ್-ಫಿತರ್ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 02 MAY 2022 9:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಸಂದೇಶ ಮಾಡಿದ್ದಾರೆ:

"ಈದ್-ಉಲ್-ಫಿತರ್ ಶುಭಾಶಯಗಳು. ಈ ಮಂಗಳಕರ ಹಬ್ಬದ ಸಂದರ್ಭವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮತ್ತು ಸಹೋದರತ್ವದ ಮನೋಭಾವವನ್ನು ಹೆಚ್ಚಿಸಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ."

***



(Release ID: 1822299) Visitor Counter : 131