ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೆಲಂಗಾಣದಲ್ಲಿ ನಡೆದ ಅವಘಡದಲ್ಲಿ ಜೀವ ಹಾನಿಗೆ ಪ್ರಧಾನ ಮಂತ್ರಿ ಸಂತಾಪ


ಪಿ.ಎಂ.ಎನ್.ಆರ್.ಎಫ್.ನಿಂದ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಘೋಷಣೆ.

Posted On: 09 MAY 2022 9:00AM by PIB Bengaluru

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ಈ ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಶ್ರೀ ಮೋದಿ ಅವರು  ಪ್ರಧಾನ ಮಂತ್ರಿಯವರ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ತಾತ್ಕಾಲಿಕ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಅವರ ಕಚೇರಿಯು ಟ್ವೀಟೊಂದರಲ್ಲಿ;

“ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ಸಂಕಟದ ಸಂಗತಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳು ಗುಣಮುಖರಾಗಲಿ ಎಂದು ಹಾರೈಕೆ. ಮೃತಪಟ್ಟವರ ಕುಟುಂಬಕ್ಕೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡಲಾಗುತ್ತದೆ: ಪ್ರಧಾನ ಮಂತ್ರಿ ಮೋದಿ” ಎಂದು ಹೇಳಿದೆ.

***


(Release ID: 1823803) Visitor Counter : 167