ಪ್ರಧಾನ ಮಂತ್ರಿಯವರ ಕಛೇರಿ

ದೆಹಲಿಯ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸಂತ್ವನದ ಪರಿಹಾರರ ಘೋಷಣೆ

Posted On: 13 MAY 2022 11:50PM by PIB Bengaluru

ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ  ಕುಟುಂಬಕ್ಕೆ ತಲಾ ರೂ. 2 ಲಕ್ಷಗಳನ್ನು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ರೂ. 50,000ಗಳ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ನೀಡುವುದಾಗಿ ಪ್ರಧಾನಮಂತ್ರಿಯವರು  ಘೋಷಿಸಿದ್ದಾರೆ.  

 ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;

 "ದೆಹಲಿಯ ಬೆಂಕಿ ದುರಂತದಲ್ಲಿ ಆಗಿರುವ ಪ್ರಾಣಹಾನಿಯಿಂದ ತುಂಬಾ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ."

 ಪ್ರಧಾನ ಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ;

 "ದೆಹಲಿಯ  ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಲಾ ರೂ. 2 ಲಕ್ಷಗಳನ್ನು ಹಾಗೂ ಗಾಯಾಳುಗಳಿಗೆ ರೂ. 50,000 ನೀಡಲಾಗುವುದು : ಪ್ರಧಾನ ಮಂತ್ರಿ  @narendramodi"

 

 

 

****



(Release ID: 1825367) Visitor Counter : 97