ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಯು.ಎ.ಇ.ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 14 MAY 2022 8:19PM by PIB Bengaluru

ಯು.ಎ.ಇ.ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಬುಧಾಬಿಯ ಆಡಳಿತಗಾರ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

"ಯು.ಎ.ಇ.ಯ ಹೊಸ ಅಧ್ಯಕ್ಷರಾಗಿ ಆಯ್ಕೆಯಾದ ಅಬುಧಾಬಿಯ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ನನ್ನ ಶುಭಾಶಯಗಳು. ಅವರ ಕ್ರಿಯಾತ್ಮಕ ಆಡಳಿತ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ, ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಾಂಧವ್ಯ ಇನ್ನೂ ಆಳವಾಗಿ ಮುಂದುವರಿಯುತ್ತದೆ ಎಂಬ ವಿಶ್ವಾಸ ನನಗಿದೆ. @MohamedBinZayed "

 

***


(रिलीज़ आईडी: 1825501) आगंतुक पटल : 183
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam