ಪ್ರಧಾನ ಮಂತ್ರಿಯವರ ಕಛೇರಿ

ಮೋರ್ಬಿಯಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಸಂತ್ರಸ್ತರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಣೆ

Posted On: 18 MAY 2022 2:56PM by PIB Bengaluru

ಗುಜರಾತ್ ನ ಮೋರ್ಬಿಯಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗುಜರಾತಿನ ಮೋರ್ಬಿಯಲ್ಲಿ ಗೋಡೆ ಕುಸಿತದ ಘಟನೆಯ ಸಂತ್ರಸ್ತರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.


ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ;

"ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ."


"ಮೋರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.)   ತಲಾ ರೂ. 2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ರೂ. 50,000 ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ"

***



(Release ID: 1826354) Visitor Counter : 132