ಪ್ರಧಾನ ಮಂತ್ರಿಯವರ ಕಛೇರಿ
ಆಶಾ ಕಾರ್ಯಕರ್ತೆಯರ ಸಂಪೂರ್ಣ ತಂಡವು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
23 MAY 2022 9:10AM by PIB Bengaluru
ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಆರೋಗ್ಯವಂತ ಭಾರತವನ್ನು ಖಾತ್ರಿಪಡಿಸುವಲ್ಲಿ ಆಶಾ ಕಾರ್ಯಕರ್ತರು ಮುಂಚೂಣಿಯಲ್ಲಿದ್ದಾರೆ ಮತ್ತು ಅವರ ಸಮರ್ಪಣೆ ಮತ್ತು ಸಂಕಲ್ಪ ಪ್ರಶಂಸನೀಯವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ ಟ್ವೀಟ್ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;
"ಇಡೀ ಆಶಾ ಕಾರ್ಯಕರ್ತರ ತಂಡಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ( @WHO ) ಮಹಾ ನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ನೀಡಲಾಗಿದೆ ಎಂಬುದು ಬಹಳ ಸಂತೋಷದ ವಿಷಯವಾಗಿದೆ. ಎಲ್ಲಾ ಆಶಾ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. ಅವರು ಆರೋಗ್ಯಕರ ಭಾರತವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಪ್ರಶಂಸನೀಯವಾಗಿದೆ."
****
(Release ID: 1827551)
Visitor Counter : 304
Read this release in:
English
,
Gujarati
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Odia
,
Tamil
,
Telugu
,
Malayalam