ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲಡಾಖ್‌ ನಲ್ಲಿ ಬಸ್ ಅಪಘಾತದಲ್ಲಿ ಸಂಭವಿಸಿದ ಭಾರತೀಯ ಸೇನಾ ಸಿಬ್ಬಂದಿಯ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

Posted On: 27 MAY 2022 7:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಡಾಖ್‌ ನಲ್ಲಿ ಬಸ್ ಅಪಘಾತದಲ್ಲಿ ಘಟಿಸಿದ ಭಾರತೀಯ ಸೇನೆಯ ಸಿಬ್ಬಂದಿಯ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್‌ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;

"ಲಡಾಖ್‌ ನಲ್ಲಿ ನಡೆದ ಬಸ್ ಅಪಘಾತದಿಂದ ನಾವು ನಮ್ಮ ವೀರ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ."

 

***

 


(Release ID: 1828925) Visitor Counter : 174